ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮೇಲಿನ ಅಕ್ರಮ ಡಿನೋಟಿಫಿಕೇಶನ್​ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಪೂರ್ವಾನುಮತಿ ಬೇಕೇ ಬೇಡವೇ ಎಂಬ ಜಿಜ್ಞಾಸೆಯನ್ನು ಇತ್ಯರ್ಥ ಮಾಡಲು ಸುಪ್ರೀಂ ಕೋರ್ಟ್​ ವಿಸ್ತೃತ ಪೀಠ ರಚಿಸಲಿದೆ.

2011ರ ಭೂ ಡಿನೋಟಿಫಿಕೇಶನ್ ರದ್ದುಗೊಳಿಸುವಂತೆ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಸುಪ್ರೀಂ ಕೋರ್ಟ್‌ ನ್ಯಾ. ಜೆ.ಬಿ. ಪರ್ದಿವಾಲ ಹಾಗೂ ನ್ಯಾ. ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಿತು.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಥಮಿಕ ಪೂರ್ವಾನುಮತಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಪೊಲೀಸರು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸಲು ಅನುಮೋದನೆ ಪಡೆಯುವ ಮೊದಲು ಸೂಕ್ತ ಪ್ರಾಧಿಕಾರ ಅಥವಾ ಸರ್ಕಾರವು ಪರಿಶೀಲಿಸಬೇಕಾದ ಪಿಸಿ ಕಾಯ್ದೆಯ ಸೆಕ್ಷನ್​ 17ಎನಲ್ಲಿ ಪರಿಗಣಿಸಲಾದ ಸಂಬಂಧಿತ ಪರಿಗಣನೆಗಳು ಯಾವುದು ಎಂಬುದರ ಕುರಿತು ನಿರ್ಣಯಿಸಬೇಕಾಗಿದೆ ಎಂದು ಕೋರ್ಟ್​ ಹೇಳಿದೆ.

ಏಪ್ರಿಲ್‌ 4ರಂದು ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್‌ ತೀರ್ಪು ನೀಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!