ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಟೆಸ್ಟ್ ನಲ್ಲಿ ಕಳ್ಳಾಟ: ಬಿಬಿಎಂಪಿ ವೈದ್ಯಾಧಿಕಾರಿ ಅಮಾನತು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಟೆಸ್ಟ್ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಬಿಬಿಎಂಪಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರೇಮಾನಂದ್ ಅವರನ್ನು ಅಮಾನತು ಮಾಡಲಾಗಿದೆ.
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕೋಡಿಗೆಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಸ್ವತ: ವೈದ್ಯಾಧಿಕಾರಿ ಹಾಗೂ ಇತರ ಸಿಬ್ಬಂದಿಗಳು ಕೋವಿಡ್ ಪರೀಕ್ಷೆಗೆ ಗಂಟಲು ಧ್ರವ ಸಂಗ್ರಹಿಸುವ ಬದಲು ಖಾಲಿ ಕಡ್ಡಿಯನ್ನು ಲಿಕ್ವಿಡ್ ಬಾಟಲ್ ಗೆ ಹಾಕಿ ಲ್ಯಾಬ್ ಗೆ ಕಳುಹಿಸುತ್ತಿದ್ದರು.
ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತರು ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಂಡಿದ್ದು, ಸ್ವಾಬ್ ಟೆಸ್ಟ್ ದುರುಪಯೋಗಪಡಿಸಿಕೊಂಡ ಆರೋಪ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಪ್ರೇಮಾನಂದ್ ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss