ಆಹಾರ ನಿಗಮದಲ್ಲಿ ಭ್ರಷ್ಟಾಚಾರ: 50 ಸ್ಥಳಗಳಲ್ಲಿ ಸಿಬಿಐ ದಾಳಿ, ಡಿಜಿಎಂ ಬಂಧನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಸಿಬಿಐ ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ ದೇಶದ 50 ಸ್ಥಳಗಳಲ್ಲಿ ದಾಳಿ ನಡೆಸಿ ತೀವ್ರ ಶೋಧ ನಡೆಸಿದೆ.

ಭಾರತೀಯ ಆಹಾರ ನಿಗಮ(ಎಫ್ಸಿಐ)ದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಗಮದ ಡಿಜಿಎಂ ಶ್ರೇಣಿಯ ಅಧಿಕಾರಿಯನ್ನು ಬಂಧಿಸಿದೆ ಜೊತೆಗೆ ಇತರೆ ಕಡೆಗಳಲ್ಲಿ ಶೋಧ ನಡೆಸಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಫ್ಸಿಐನಲ್ಲಿ 50,000 ಲಂಚ ಪಡೆಯುತ್ತಿದ್ದ ಡೆಪ್ಯುಟಿ ಜನರಲ್ ಮ್ಯಾನೇಜರ್(ಡಿಜಿಎಂ)ನನ್ನು ಸಿಬಿಐ ಬಂಧಿಸಿದೆ.

ಎಫ್ಸಿಐನಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಕೇಂದ್ರ ತನಿಖಾ ಸಂಸ್ಥೆ ಗುಪ್ತಚರ ಮಾಹಿತಿ ಕಲೆ ಹಾಕುತ್ತಿತ್ತು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!