ಭ್ರಷ್ಟಾಚಾರ, ಸುಳ್ಳು, ಮೋಸ ಕಾಂಗ್ರೆಸ್ ಮನೆ ದೇವರು: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ವರದಿ, ಚಿತ್ರದುರ್ಗ:

ಭ್ರಷ್ಟಾಚಾರ, ಸುಳ್ಳು, ಮೋಸ ಕಾಂಗ್ರೆಸ್ ಪಕ್ಷದ ಮನೆ ದೇವರು ಎಂದು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸುಳ್ಳೇ ಮನೆದೇವರು. ಎಲ್ಲಾ ಕಡೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರುವುದರಿಂದ ಅವರಲ್ಲಿ ನಡಕ ಉಂಟಾಗಿದೆ ಎಂಬ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸುಳ್ಳು ನಮ್ಮ ಮನೆ ದೇವರಲ್ಲ, ಭ್ರಷ್ಟಾಚಾರ, ಸುಳ್ಳು, ಮೋಸ ಕಾಂಗ್ರೆಸ್ ಮನೆ ದೇವರು. ರಾಬರಿ, ದರೋಡೆ ಮಾಡಿದ್ದು ವಾಪಸ್ ಕೊಟ್ಟರೆ ತಪ್ಪು ಒಪ್ಪಿಕೊಂಡಂತಲ್ಲವೇ? ಹಾಗಾಗಿ ನಿಮ್ಮ ಮೇಲೇಕೆ ಕ್ರಮ ಜರುಗಿಸಬಾರದು? ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ದಿನಕ್ಕೊಂದು ಹಗರಣ ಬಯಲಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ನೀಡುತ್ತಿಲ್ಲ. ಜಗ್ಗೋದಿಲ್ಲ, ಬಗ್ಗೋದಿಲ್ಲ ಅಂದವರು ಸೈಟ್ ಏಕೆ ವಾಪಸ್ ಕೊಟ್ಟರು. ಪ್ರಿಯಾಂಕ ಖರ್ಗೆ ೫ ಎಕರೆ ಜಾಗ ಏಕೆ ವಾಪಸ್ ಕೊಟ್ಟರು. ಕಾಂಗ್ರೆಸ್‌ನಿಂದ ಅಘೋಷಿತ ಕಾನೂನು ಜಾರಿ ಆದಂತಿದೆ. ಯಾರೆಷ್ಟು ಬೇಕಾದರೂ ಕದಿಯಬಹುದು. ಸಿಕ್ಕಿಬಿದ್ದಾಗ ವಾಪಸ್ ಕೊಟ್ಟರಾಯ್ತು ಎನ್ನುವ ಮನೋಭಾವದಲ್ಲಿದ್ದಾರೆ ಎಂದು ಟಾಂಗ್ ನೀಡಿದರು.

ಎಂ ಸಿದ್ದರಾಮಯ್ಯ ಇರೋವರೆಗೆ ಮುಸ್ಲೀಮರು ಬಳಿಕ ಬೊಂಬೆ ಎಂಬ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಅನ್ಸಾರಿ ಹೇಳಿಕೆ ಸಿದ್ದರಾಮಯ್ಯ ಬಗ್ಗೆ ಸ್ಪಷ್ಟಪಡಿಸುತ್ತದೆ. ನಾನೇನೂ ಹೇಳಲ್ಲ. ರಾಜ್ಯದ ಜನರೇ ತೀರ್ಮಾನಿಸಲಿ. ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಆದೇಶ ಸರಿಯಿದೆ. ನ್ಯಾಯಾಂಗದ ಆದೇಶ ಬೀದೀಲಿ ಪ್ರಶ್ನಿಸೋದು ಸರಿಯಲ್ಲ ಎಂದರು.

ಎರಡು ಗುಂಪುಗಳಾಗಿ ಜಯಂತಿ ಆಚರಣೆ ಮಾಡುವ ಕುರಿತು ಪ್ರತಿಕ್ರಿಯಿಸಿ, ಇಲ್ಲಿ ಗುಂಪುಗಳ ಪ್ರಶ್ನೆಯೇ ಇಲ್ಲ. ಸರ್ಕಾರಿ ಕಾರ್ಯಕ್ರಮ ಅವರು ಮಾಡುತ್ತಿದ್ದಾರೆ. ಸಮುದಾಯದ ಪರವಾಗಿ ಶ್ರೀಗಳ ನೇತೃತ್ವದಲ್ಲಿ ಇಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಎರಡು ಕಾರ್ಯಕ್ರಮಗಳು ಅವರ ನೆನಪಿಗಾಗಿ. ಇದರಿಂದ ತಪ್ಪು ಸಂದೇಶ ಹೋಗುವುದು ಬೇಡ. ಎರಡು ಗುಂಪು ಅನ್ನೋದನ್ನು ಮರೆತುಬಿಡಬೇಕು ಎಂದು ನಾರಾಯಣಸ್ವಾಮಿ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!