Wednesday, July 6, 2022

Latest Posts

ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್‌ನಿಂದ: ಸಚಿವ ಡಾ. ಕೆ. ಸುಧಾಕರ್

ಹೊಸದಿಗಂತ ವರದಿ, ಮಂಡ್ಯ:

ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್‌ನಿಂದ. ತಾವೇ ಇದುವರೆಗೆ ಭ್ರಷ್ಟಾಚಾರ ನಡೆಸಿ ಅದನ್ನು ಬೇರೆಯವರ ಮೇಲೆ ಕೂಬೆ ಕೂರಿಸುವ ಕೆಲಸ ಮಾಡುವುದೇ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಟೀಕಿಸಿದರು.
ಯುವ ಮುಖಂಡ ಅಶೋಕ್ ಜಯರಾಂ ನಿವಾಸಕ್ಕೆ ಆಗಮಿಸಿದ್ದ ಅವರನ್ನು ಭೇಟಿಯಾದ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸಿದೆ. ಈ ವೇಳೆ ದೇಶದಲ್ಲಿ ಯಾವ ಪ್ರಮಾಣದಲ್ಲಿ ಭ್ರಷ್ಟಾಚಾರ ಇತ್ತು ಎಂಬುದನ್ನು ತಿಳಿಸಿ ಹೇಳಬೇಕಿಲ್ಲಘಿ. ಬಿಜೆಪಿ ಸರ್ಕಾರದ ವಿರುದ್ಧ ಯಾರೋ ಆರ್‌ಟಿಐ ಕಾರ‌್ಯಕರ್ತ, ಅಥವಾ ಸಾಮಾನ್ಯ ವ್ಯಕ್ತಿಯನ್ನು ಮುಂದಿಟ್ಟುಕೊಂಡು ದೂರು ಇಲ್ಲ ಸಲ್ಲದ ದೂರು ಕೊಡಿಸುವುದೇ ಕಾಂಗ್ರೆಸ್‌ನ ಕೆಲಸವಾಗಿದೆ ಎಂದು ದೂರಿದರು.
ಸರ್ಕಾರದ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದರ ಬಗ್ಗೆ ತನಿಖಾ ಸಂಸ್ಥೆಗಳಿಗೆ ದೂರು ನೀಡಬೇಕು. ರಾಜ್ಯದಲ್ಲಿ ಲೋಕಾಯುಕ್ತ, ಎಸಿಬಿಯಂತಹ ತನಿಖಾ ಸಂಸ್ಥೆಗಳಿಗೆ ದೂರು ಕೊಡಲಿ, ಅದು ಬಿಟ್ಟು ಪ್ರಧಾನಿ, ಮುಖ್ಯಮಂತ್ರಿಗೆ ದೂರು ಕೊಡಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವುದು, ಮಾಧ್ಯಮಗಳಲ್ಲಿ ಇಲ್ಲದ ಹೇಳಿಕೆ ನೀಡಿ ಗೊಂದಲ ಸೃಷ್ಠಿಸುವುದೇ ಆಗಿದೆ ಎಂದು ಕಿಡಿಕಾರಿದರು.
ಯುವಕರಿಂದ ಪಕ್ಷಕ್ಕೆ ಶಕ್ತಿ :
ಹಳೇ ಮೈಸೂರು ಭಾಗದಲ್ಲಿ ಶಕ್ತಿಹೀನವಾಗಿದ್ದ ಭಾರತೀಯ ಜನತಾ ಪಕ್ಷಕ್ಕೆ ಇದೀಗ ಹೊಸ ಚೈತನ್ಯ ಬಂದಿದೆ. ಪ್ರಧಾನಿ ನರೇಂದ್ರಮೋದಿಯವರು ಬಂದುಹೋದ ನಂತರ ಪಕ್ಷಕ್ಕೆ ವಿವಿಧ ಪಕ್ಷಗಳಿಂದ ನಾಯಕರು, ಯುವಕರ ದಂಡೇ ಹರಿದುಬರಲಾರಂಭಿಸಿದೆ ಎಂದು ಹೇಳಿದರು.
ಮಂಡ್ಯಘಿ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ನಮ್ಮ ಪಕ್ಷದ ವರ್ಚಸ್ಸು ವೃದ್ಧಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಮಂಡ್ಯದಲ್ಲಿ ಯುವ ಮುಖಂಡ ಅಶೋಕ್ ಜಯರಾಂ ಕೂಡ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ಅವರ ತಂದೆ ಜಯರಾಂ ಅವರು ಈ ಭಾಗದಲ್ಲಿ ಒಳ್ಳೆಯ ಹೆಸರು ಮಾಡಿದವರು. ಹಿಂದೆ ಜನತಾ ಪರಿವಾರದಲ್ಲಿದ್ದುಕೊಂಡು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಪುತ್ರರಾದ ಅಶೋಕ್ ಅವರು ಸಹ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss