ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕುಂಟೆ ಭುವನೇಶ್ವರಿ ನಗರದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಸಾವಿನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಾಲಕರು ಭುವನ್ (1) ಮತ್ತು ಬೃಂದಾ (4) ಇದ್ದರೆ, ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ದುರಂತ ಘಟನೆ ಗುರುವಾರ ರಾತ್ರಿ ವಿಜಯಲಕ್ಷ್ಮಿಯ ತಂಗಿ ಮನೆಗೆ ಬಂದು ನೋಡಿದಾಗ ತಿಳಿದುಬಂದಿದೆ.
ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್ ಮತ್ತು ವಿಜಯಲಕ್ಷ್ಮಿ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ ರಮೇಶ್ ಒಂದು ಮಾಲ್‌ನಲ್ಲಿ ಉದ್ಯೋಗದಲ್ಲಿದ್ದ ಎಂದು ತಿಳಿದು ಬಂದಿದೆ. ತಾನು ಮತ್ತೊಂದು ಮದುವೆಯಾಗಿದ್ದು, ಡಿವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್ ಬೆದರಿಕೆ ಹಾಕ್ತಿದ್ದ, ಹಿಂಸಾತ್ಮಕ ವರ್ತನೆ ಮತ್ತು ಪತಿಯ ಬೆದರಿಕೆ ಈ ಘಟನೆಯ ಪ್ರಮುಖ ಕಾರಣವಾಗಿರಬಹುದು ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ಈ ಘಟನೆಯ ಸಂಬಂಧಿಸಿ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಗಲಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.