Saturday, June 25, 2022

Latest Posts

ಪರಿಷತ್ ಚುನಾವಣೆ: ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 99.86 ರಷ್ಟು ಮತದಾನ

ಹೊಸ ದಿಗಂತ ವರದಿ, ಶಿವಮೊಗ್ಗ:

ವಿಧಾನ ಪರಿಷತ್ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣಾ ಮತದಾನ ಸುಗಮವಾಗಿ ಕೊನೆಗೊಂಡಿದೆ. ಜಿಲ್ಲೆಯಲ್ಲಿ ಶೇ. 99.86 ರಷ್ಟು ಮತದಾನ ಆಗಿದೆ. 4164 ಮಂದಿ ಮತ ಚಲಾಯಿಸುವ ಅರ್ಹತೆ ಹೊಂದಿದ್ದರು.
ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿತ್ತು.  ಮಧ್ಯಾಹ್ನ 12 ಗಂಟೆ ಹೊತ್ತಿಗಾಗಲೇ ಶೇ.70ರಷ್ಟು ಮತದಾನ ಪೂರ್ಣಗೊಂಡಿತ್ತು. ಮಧ್ಯಾಹ್ನ 2 ಗಂಟೆ ವೇಳೆಗಾಗಲೇ ಶೇ.96.49ರಷ್ಟು (4018 ಮತದಾರರು)ಮತದಾನ ಪ್ರಕ್ರಿಯೆ ಮುಗಿದಿತ್ತು.
ಬೆಳಗ್ಗೆಯೇ ಮತ ಚಲಾಯಿಸಿದ ಬಿಎಸ್‌ವೈ-ಕೆಎಸ್‌ಈ. 
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಪುರಸಭೆಯಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆಯೇ ಮತ ಚಲಾಯಿಸಿ ಇತರರಿಗೆ ಮಾದರಿಯಾದರು. ಸಂಸದ ರಾಘವೇಂದ್ರ ಕೂಡ ಜೊತೆಗೆ ಮತ ಚಲಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಬೆಳಗ್ಗೆ 9ರ ಸುಮಾರಿಗೆ ಮತ ಚಲಾಯಿಸಿದರು. ಮಹಾನಗರ ಪಾಲಿಕೆ ಸದಸ್ಯರು ಈಶ್ವರಪ್ಪ ಅವರಿಗೆ ಸಾಥ್ ನೀಡಿದರು. ಈಶ್ವರಪ್ಪ ಅವರಲ್ಲದೇ ಶಾಸಕರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಅಶೋಕ ನಾಯ್ಕ ಕೂಡ ಪಾಲಿಕೆಯಲ್ಲಿ ಮತ ಚಲಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss