October 10, 2026
Saturday, October 10, 2026
spot_img

ಪರಿಷತ್ ಚುನಾವಣೆ | ಮನಾಲಿಯಲ್ಲಿ ‘ಬಿಜೆಪಿ ಸುನಾಮಿ’: ಒಂದೇ ಒಂದು ಸ್ಥಾನ ಕೂಡ ಗೆಲ್ಲದ ಕಾಂಗ್ರೆಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ.

ಜಾಗತಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರುವ ಮನಾಲಿ ನಗರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಕ್ಲೀನ್ ಸ್ವೀಪ್ ಸಾಧಿಸಿದ್ದು, ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ.

ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ

ಒಟ್ಟು 7 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಮುಜುಗರ ಉಂಟುಮಾಡಿದೆ. ಸ್ಥಳೀಯ ಮಟ್ಟದಲ್ಲಿ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ:

ಕಾಂಗ್ರೆಸ್ ಹಿನ್ನಡೆಗೆ ಇದೇ ಕಾರಣ

ಮೂಲಸೌಕರ್ಯ ಸಮಸ್ಯೆಗಳು, ಪ್ರವಾಸೋದ್ಯಮ ಕ್ಷೇತ್ರದ ಸವಾಲುಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ. ಜೊತೆಗೆ ಪಕ್ಷದ ಒಳಗಿನ ಅಸಮಾಧಾನ ಮತ್ತು ಸಮನ್ವಯದ ಕೊರತೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ವಿಶ್ಲೇಷಿಸಲಾಗಿದೆ.

ಇತ್ತ ಬಿಜೆಪಿ ಸ್ಥಳೀಯ ಸಮಸ್ಯೆಗಳನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡು ಸಂಘಟಿತ ಪ್ರಚಾರ ನಡೆಸಿತ್ತು. ಅದರ ಫಲವಾಗಿ ಪಕ್ಷಕ್ಕೆ ಭರ್ಜರಿ ಗೆಲುವು ದೊರೆತಿದೆ. ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೇರಿದಂತೆ ಬಿಜೆಪಿ ನಾಯಕರು ಈ ಗೆಲುವನ್ನು ಸಂಭ್ರಮಿಸಿದ್ದಾರೆ.

Must Read