ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ ಮಾಡಿದೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ 21ರಂದು ಕೌನ್ಸೆಲಿಂಗ್ ನಡೆಯಲಿದೆ.
ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಕೌನ್ಸಿಲಿಂಗ್ ಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಅಭ್ಯರ್ಥಿಗಳ ವಿವರಗಳನ್ನು ಅ.19ರಂದು ರಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.