ಚಾಂಪಿಯನ್ಸ್‌ ಟ್ರೋಫಿಗೆ ಕ್ಷಣಗಣನೆ: ಏಕದಿನ ಕ್ರಿಕೆಟ್‌ಗೆ ಗುಡ್ ಬೈ ಹೇಳಿ ಆಸೀಸ್‌ ಗೆ ಶಾಕ್ ಕೊಟ್ಟ ಸ್ಟೋಯ್ನಿಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2025ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ 13 ದಿನಗಳು ಬಾಕಿಯಿರುವಾಗಲೇ ಆಸೀಸ್‌ ಸ್ಟಾರ್‌ ಆಲ್‌ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಫೆ.19ರಿಂದ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗುತ್ತಿದ್ದು, ಸ್ಟಾರ್‌ ಆಲ್‌ರೌಂಡರ್‌ ಆಗಿ ಗುರುತಿಸಿಕೊಂಡಿದ್ದ ಸ್ಟೋಯ್ನಿಸ್‌ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಹೊಂದಿದ್ದರು. ಆದ್ರೆ ಏಕಾಏಕಿ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್‌ ಲೋಕದಲ್ಲಿ ಚರ್ಚೆ ಹುಟ್ಟುಹಾಕಿದೆ.

2015ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸ್ಟೋಯ್ನಿಸ್‌, ಈವರೆಗೂ 74 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ 93.96 ಸ್ಟ್ರೈಕ್ ರೇಟ್‌ನಲ್ಲಿ 1,495 ರನ್ ಗಳಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್​ನಲ್ಲಿ ನ್ಯೂಜಿಲೆಂಡ್ ವಿರುದ್ಧದ ನಡೆದಿದ್ದ ಪಂದ್ಯದಲ್ಲಿ ಅಜೇಯ 146 ರನ್​ ಗಳಿಸಿದ್ದು ಏಕದಿನ ಸ್ವರೂಪದಲ್ಲಿ ಅತ್ಯಧಿಕ ಸ್ಕೋರ್​ ಆಗಿತ್ತು.

ಜೊತೆಗೆ 74 ಪಂದ್ಯಗಳಲ್ಲಿ 43.12 ಸರಾಸರಿಯಲ್ಲಿ 48 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ನವೆಂಬರ್‌ 10ರಂದು ಪರ್ತ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. 2019ರಲ್ಲಿ ಕ್ರಿಕೆಟ್​ ಆಸ್ಟ್ರೇಲಿಯಾ ನೀಡುವ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!