ಹಾಸನದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕ್ಷಣಗಣನೆ: ಭದ್ರತೆಗಾಗಿ 2 ಸಾವಿರ ಪೊಲೀಸರ ನಿಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದೆ.

ಅರಸೀಕೆರೆ ರಸ್ತೆಯ ಎಸ್​ಎಂ ಕೃಷ್ಣ ನಗರದಲ್ಲಿರುವ ಕೆಎಸ್​ ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶ ಉದ್ಘಾಟನೆ ಆಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟ ದಂಡೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. 480 ಅಡಿ ಅಗಲ ಮತ್ತು 600 ಅಡಿ ಉದ್ದದ ಬೃಹತ್‌ ಟೆಂಟ್‌ ಹಾಕಲಾಗಿದೆ. ಸುಮಾರು 70 ಸಾವಿರ ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಸಮಾವೇಶದ ಸ್ಥಳದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಬ್ಯಾನರ್ ಅಡಿಯಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಾಡಿರುವ ಆರೋಪಗಳಿಗೆ ಉತ್ತರ ನೀಡುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಿಎಂ, ಡಿಸಿಎಂ ಸೇರಿದಂತೆ 16 ಸಚಿವರು ಭಾಗವಹಿಸಲಿದ್ದಾರೆ. ಅಲ್ಲದೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ವ್ಯವಹಾರಗಳ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಲಿದ್ದಾರೆ.

ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ, ಪೊಲೀಸ್ ಇಲಾಖೆ ಸಾಕಷ್ಟು ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಸಮಾವೇಶದ ಭದ್ರತೆಗಾಗಿ 5 ಎಸ್ಪಿ, 6 ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿ, 40 ಇನ್ಸ್ಪೆಕ್ಟರ್​ ಮತ್ತು 80 ಪಿ.ಎ.ಸ್.ಐಗಳನ್ನು ಒಳಗೊಂಡ ಸುಮಾರು 2,000 ಪೊಲೀಸರನ್ನು ನೆರೆ ಜಿಲ್ಲೆಗಳಾದ ಮಂಡ್ಯ, ಮೈಸೂರು ಕೊಡಗಿನಿಂದ ಕರೆಸಿಕೊಳ್ಳಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!