ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ಇಂದು 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಚಿತ್ರಣ ಸಿಗಲಿದೆ.
ಚುನಾವಣಾ ಆಯೋಗವು ಕೋವಿಡ್ ಮಾರ್ಗಸೂಚಿಯನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಕಲ ಸಿದ್ಥತೆಗಳನ್ನು ಕೈಗೊಂಡಿದೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿದೆ.
ಇನ್ನು ಕಳೆದ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿದೆ.