ಸಾಂಸ್ಕೃತಿಕ ಸಂಭ್ರಮ ದಸರಾಗೆ ದಿನಗಣನೆ: ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

ಹೊಸದಿಗಂತ ವರದಿ ಮೈಸೂರು:

ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು ವಾಹನ ನಿಲುಗಡೆ ಸ್ಥಳದಲ್ಲಿ ನಡೆಸಲಾಯಿತು.

ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ ತೋಪು ಹಾರಿಸುವ ಮೂಲಕ ಈ ಅಭ್ಯಾಸ ನಡೆಸಲಾಯಿತು.

ಮೈಸೂರು ದಸರಾದ ಆಕರ್ಷಣೆಯ ವಾದ ಜಂಬುಸವಾರಿ ದಿನದಂದು ಅರಮನೆ ಆವರಣದಲ್ಲಿ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮುನ್ನ 21 ಕುಶಾಲತೋಪನ್ನು ಹಾರಿಸಲಾಗುತ್ತದೆ. ಆನೆಗಳು ಕುದುರೆಗಳು ಈ ವೇಳೆ ಹೆದರಬಾರದು ಎಂಬ ಹಿನ್ನೆಲೆಯಲ್ಲಿ ಇಂದು ಕುಶಾಲತೋಪು ಅಭ್ಯಾಸವನ್ನು ನಡೆಸಲಾಯಿತು.ಇಂದು ಮೊದಲ ಸುತ್ತಿನ ಕುಶಾಲತೋಪು ಅಭ್ಯಾಸವನ್ನು ನಡೆಸಲಾಗಿದೆ. ಇನ್ನು ಎರಡು ಬಾರಿ ಅಂದರೆ ಸೆ. 29 ಹಾಗೂ ಅ. 1ರಂದು ಕುಶಾಲ ತೋಪು ಅಭ್ಯಾಸವನ್ನು ನಡೆಸಲಾಗುವುದು.

ಮೈಸೂರು ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಆನೆಗಳಿಗೆ ಸ್ವಾಗತವನ್ನು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಾಡಲಾಯಿತು

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!