May 15, 2026
Friday, May 15, 2026
spot_img

‘ದಳಪತಿ’ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ನಟ ದಳಪತಿ ವಿಜಯ್​ ನೇತೃತ್ವದ ಟಿವಿಕೆ ಪಕ್ಷ ಭರದಿಂದ ಸಿದ್ಧತೆ ನಡೆಸುತ್ತಿದ್ದು, ಈ ಸಂಬಂಧ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್​ ಬೆಂಬಲ ವ್ಯಕ್ತಪಡಿಸಿದ್ದು, ಈ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಿದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಸರ್ಕಾರ ರಚನೆಗೆ ಟಿವಿಕೆ ಪಕ್ಷದಿಂದ ಅಧಿಕೃತ ಪತ್ರ ಬಂದಿದೆ. ಸರಕಾರ ರಚನೆಗೆ ಬಹುಮತ ಹೊಂದಿದ್ದು, ಹಾಗಾಗಿ ಆಹ್ವಾನಿಸಬೇಕೆಂದು ಕೋರಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರವೊಂದು ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಾಳೆ ಟಿವಿಕೆ ವಿಜಯ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಸಮಾರಂಭದ ಹಿನ್ನೆಲೆ ನೆಹರು ಕ್ರೀಡಾಂಗಣ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ.

ವಿಜಯ್ ಪದಗ್ರಹಣ ಕಾರ್ಯಕ್ರಮಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ. ಜೊತೆಗೆ ಹಲವು ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !