ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2:30ರ ವೇಳೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಶುರುವಾಗಲಿದೆ.
ಈ ರಣರೋಚಕ ಪಂದ್ಯಕ್ಕೆ ಕಾದು ಕುಳಿತಿರುವ ರಾಜ್ಯದ ಕ್ರೀಡಾ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇ ಪೂಜೆ ಹಮ್ಮಿಕೊಂಡಿದ್ದರೆ, ಇನ್ನೂ ಕೆಲವರು ಗೆದ್ದು ಬಾ ಭಾರತ, ಆಲ್ ದಿ ಬೆಸ್ಟ್ ಟೀಂ ಇಂಡಿಯಾ ಅಂತ ಶುಭ ಹಾರೈಸಿದ್ದಾರೆ.
ಇಂದು ದುಬೈನ ಅಂತಾರಾಷ್ಟ್ರೀಯ ಕೀಡಾಂಗಣದಲ್ಲಿ 5ನೇ ಪಂದ್ಯ ನಡೆಯುತ್ತಿದ್ದು, ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.