Thursday, August 11, 2022

Latest Posts

ಕರಾವಳಿಗೆ ತೌಕ್ತೆ ಚಂಡಮಾರುತ ಪ್ರವೇಶಕ್ಕೆ ಕ್ಷಣಗಣನೆ: ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರಾವಳಿ ಕರ್ನಾಟಕವನ್ನು ತೌಕ್ತೆ ಚಂಡಮಾರುತ ಪ್ರವೇಶಿಸಲು ಕ್ಷಣಗಣನೆ ಆರಂಭವಾಗಿದ್ದು, ಇದರ ಮುನ್ಸೂಚನೆಯಂತೆ ಘಾಲ್ಯಾ ಅಬ್ಬರದ ಜೊತೆಗೆ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.
ಮಂಗಳೂರು ಭಾಗದ ಹಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗುತ್ತಿದೆ. ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಮಂಗಳೂರಿನ ಸೋಮೇಶ್ವರ, ಉಳ್ಳಾಲ, ಪೆಣಂಬೂರು, ಸುರತ್ಕಲ್ ಕಡಲ ಕಿನಾರೆಗಳಲ್ಲಿ ಭಾರೀ ಕಡಲ್ಕೊರೆತವಾಗುತ್ತಿದ್ದು, ಹಲವು ಮನೆಗಳು ಅಪಾಯದ ಅಂಚಿನಲ್ಲಿದೆ.
ಸೋಮೇಶ್ವರದ ಸ್ಮಶಾನದ ಆವರಣ ಗೋಡೆ ಕಡಲ್ಕೊರೆತದಿಂದಾಗಿ ಬಿರುಕು ಬಿಟ್ಟಿದ್ದು, ಸಮುದ್ರ ಪಾಲಾಗುವ ಆತಂಕ ಎದುರಾಗಿದೆ.
ಕೇವಲ ಮಂಗಳೂರು ಮಾತ್ರವಲ್ಲದೆ ಉಡುಪಿ, ಉತ್ತರ ಕನ್ನಡದ ಕೆಲ ಕಡಲ ಕಿನಾರೆಗಳಲ್ಲಿ ಸಮುದ್ರದ ಅಬ್ಬರದಿಂದಾಗಿ ಕಡಲ್ಕೊರೆತ ತೀವ್ರವಾಗುತ್ತಿದೆ. ಬೀಚ್ ಬಳಿಯ ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚಿಸಿದ್ದಾರೆ.
ಸೋಮೇಶ್ವರ ಭಾಗಕ್ಕೆ ಮೀನುಗಾರಿಕಾ ಇಲಾಖೆ ಮತ್ತು ಬಂದರು ಇಲಾಖೆಯ ನಿರ್ದೇಶಕರು ಭೇಟಿ ನೀಡಿದ್ದು, ವರದಿ ನೀಡಿದ್ದಾರೆ. ತೌಕ್ತೆ ಚಂಡಮಾರುತ ಮೇ 15 ಮತ್ತು ಮೇ 16 ರಂದು ರಾಜ್ಯದ ಕರಾವಳಿಗೆ ಅಪ್ಪಳಿಸಲಿದ್ದು, ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss