July 17, 2026
Friday, July 17, 2026
spot_img

ಐಪಿಎಲ್ ಬಿಗ್ ಫೈನಲ್ ಗೆ ಕೌಂಟ್‌ಡೌನ್: ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಫ್ಲೈಓವರ್‌ಗಳು ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಬಿಗ್ ಫೈನಲ್ ಗೆ ಕೌಂಟ್‌ಡೌನ್ ಶುರುವಾಗಿದ್ದು, ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಾಡಲಿವೆ. ಈ ಬಾರಿ ಟ್ರೋಪಿ ಯಾರ ಪಾಲಾಗಲಿದೆ ಎಂಬುವುದನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.

ಪೊಲೀಸರು ಅಲರ್ಟ್

ಆದ್ರೆ, ಈ ಹೊತ್ತಿನಲ್ಲೇ ಸಿಲಿಕಾನ್‌ ಸಿಟಿಯಲ್ಲಿ ಸಂಭ್ರಮಾಚರಣೆಯ ನೆಪದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ. ರಾತ್ರಿ 11 ಗಂಟೆ ಬಳಿಕ ನಗರದ ಪ್ರಮುಖ ಫ್ಲೈಓವರ್‌ಗಳನ್ನು ಬಂದ್‌ ಮಾಡುವಂತೆ ಸೂಚನೆ ನೀಡಲಾಗಿದೆ.

ಮುಂಜಾನೆ 5 ಗಂಟೆ ವರೆಗೆ ಬಂದ್

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಎಲಿವೇಟೆಡ್ ಫ್ಲೈಓವರ್, ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್‌ ಅನ್ನು ರಾತ್ರಿ 11 ಗಂಟೆಯಿಂದ ಜೂನ್ 01 ರ ಮುಂಜಾನೆ 5 ಗಂಟೆ ತನಕ ಬಂದ್ ಮಾಡಲು ಸೂಚಿಸಲಾಗಿದೆ. ಇದರ ಜೊತೆಗೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಂದ್ಯ ವೀಕ್ಷಿಸಲು ಯಾವ ಜಾಗಗಳಲ್ಲಿ ಹೆಚ್ಚು ಜನ ಸೇರುತ್ತಾರೆ ಅನ್ನೋ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಲಾಗಿದ್ದು, ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !