April 21, 2026
Tuesday, April 21, 2026
spot_img

ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ: ನಾಳೆ ಮೆಟ್ರೋ, ಬಿಎಂಟಿಸಿ ಬಳಸಲು ಸಾರ್ವಜನಿಕರಿಗೆ ಪೊಲೀಸರ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್-2026ರ ಉದ್ಘಾಟನಾ ಪಂದ್ಯ ನಾಳೆ ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಮೆಟ್ರೋ ಮತ್ತು ಬಿಎಂಟಿಸಿ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಸಂಖ್ಯೆಯನ್ನು
ದ್ವಿಗುಣಗೊಳಿಸಲಾಗಿದ್ದು, ಈ ಬಾರಿ 22ರಿಂದ 45 ದ್ವಾರಗಳನ್ನು ತೆರೆಯಲಾಗಿದೆ. ಪ್ರೇಕ್ಷಕರು ಟಿಕೆಟ್‌ನಲ್ಲಿ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದ್ದು, ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !