ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಗೆ ಕೌಂಟ್ ಡೌನ್ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಸರ್ಕಾರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.
ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡಿಸಲು ಮುಂದಾಗಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಕೇವಲ ಗ್ಯಾರಂಟಿ ಅಬ್ಬರದಲ್ಲೇ ಮುಳುಗಿ ಹೋಗಿದ್ದ ಕಾಂಗ್ರೆಸ್ ಈ ಬಾರಿ ಹೊಸದೇನಾದರೂ ಕೊಡಬಹುದಾ ಎಂಬ ನಿರೀಕ್ಷೆಗಳಿವೆ.
ಸಿದ್ದರಾಮಯ್ಯ ಅವರಿಗೆ ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು ಬಜೆಟ್ ಓದುವ ಸಾಧ್ಯತೆ ಇದೆ. ಇನ್ನು ಬಜೆಟ್ ಗಾತ್ರ 4 ಲಕ್ಷ ಕೋಟಿ ಮೀರುವ ಸಾಧ್ಯತೆ ಇದೆ.