ಹೊಸದಿಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ಹೊಸವರ್ಷಾಚರಣೆ ಸಂಭ್ರಮಕ್ಕೆ ಸಜ್ಜಾಗುತ್ತಿದೆ ಈ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸರ್ವ ಸಿದ್ಧತೆ ನಡೆಸಿಕೊಂಡಿದ್ದು, ಎಲ್ಲೆಡೆ ಕಣ್ಗಾವಲಿರಿಸಿದೆ.
ಈಗಾಗಲೇ ಎಂಜಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರಗಳಿಗೆ ಪೊಲೀಸ್ ಆಯುಕ್ತರು ಭೇಟಿ ನೀಡಿದ್ದು, ಭದ್ರತೆ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಿಸಿ ಕ್ಯಾಮೆರಾ, ಬ್ಯಾರಿಗೇಟ್, ವಾಚ್ ಟವರ್‌ಗಳನ್ನೂ ಸಜ್ಜುಗೊಳಿಸಲಾಗಿದೆ.
ಸಂಭ್ರಮಾಚರಣೆ ಹೆಸರಿನಲ್ಲಿ ಪಾರ್ಟಿಗಳಲ್ಲಿ ಡ್ರಗ್ಸ್ ಪೂರೈಕೆ ತಡೆಯಲು ಪ್ರತ್ಯೇಕ ಪೊಲೀಸ್ ತಂಡ ರಚಿಸಲಾಗಿದೆ. ಜೊತೆಗೆ ಅಕ್ರಮವಾಗಿ ಮದ್ಯ ಸರಬರಾಜು ಆಗುವ ಸಾಧ್ಯತೆಯಲ್ಲಿ ಅಬಕಾರಿ ಇಲಾಖೆ ಜತೆ ಜಂಟಿ ತಂಡಗಳನ್ನು ರಚಿಸಿ ತೀವ್ರ ನಿಗಾ ವಹಿಸಲಾಗಿದೆ. ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡಾ ಈಗ ತಾತ್ಕಾಲಿಕ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.
ಇನ್ನು ಮಹಿಳೆಯರ ಸುರಕ್ಷತೆಗಾಗಿ ನಗರದ 69 ಮಹಿಳಾ ಹೊರಠಾಣೆಗಳ ಜತೆ ಬ್ರಿಗೇಡ್ ರಸ್ತೆಯಲ್ಲಿ 16ಕ್ಕೂ ಅಧಿಕ ’ಸೇಫ್ಟಿ ಐಲ್ಯಾಂಡ್’ ಸ್ಥಾಪಿಸಲಾಗಿದೆ.