ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಹೊಸ ವರ್ಷ ಆಚರಣೆ ದಿನಗಣನೆ ಆರಂಭವಾಗಿದೆ. ಹಾಗಾಗಿ ಪೊಲೀಸರು ಈ ಬಾರಿ ಸಂಭ್ರಮಾಚರಣೆ ವೇಳೆ ಹದ್ದಿನ ಕಣ್ಣಿಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.
ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಗಳನ್ನ ಮಾಡಿಕೊಂಡಿದ್ದರು ಸುಮಾರು 36 ಅಂಶಗಳನ್ನು ಒಳಗೊಂಡ ಗೈಡ್ ಲೈನ್ಸ್ ಅನ್ನು ಬೆಂಗಳೂರು ಪೊಲೀಸ್ ಆಯುಕ್ತರುಬಿಡುಗಡೆ ಮಾಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆಯಂತೆ ಸಿದ್ಧತೆ ಮಾಡಿಕೊಳ್ಳಲು ಆಯಾ ಡಿಸಿಪಿಗಳಿಗೆ ಸೂಚನೆ ಕೊಡಲಾಗಿದೆ. ಪ್ರಮುಖವಾಗಿ ಇತ್ತೀಚಿಗೆ ಭಯೋತ್ಪಾದಕ ಚಟುವಟಿಕೆಗಳು ಹಾಗೂ ಕೆಲವು ಸಮಾಜ ಘಾತುಕ ಚಟುವಟಿಕೆಗಳು ಶಾಂತಿಗೆ ಭಂಗವನ್ನುಂಡುಮಾಡುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಅಟ್ಟಹಾಸ ಮೆರೆಯುವ ಸಾಧ್ಯತೆ ಇರುತ್ತೆ, ಅಂತವರ ಬಗ್ಗೆ ಹೆಚ್ಚು ಜಾಗ್ರತೆಯಿಂದ ಇರುವಂತೆ ಸೂಚನೆ ಕೊಡಲಾಗಿದೆ. ಹಾಗಾದರೆ ಬೆಂಗಳೂರು ಪೊಲೀಸರು ನ್ಯೂ ಇಯರ್ ಬಂದೋಬಸ್ತ್‌ಗೆ ಮಾಡಿಕೊಂಡಿರುವ ಬ್ಲೂ ಪ್ರೀಂಟ್ ಏನು ಎಂಬುದರ ಮಾಹಿತಿ ಇಲ್ಲಿದೆ.