ಕಲಬುರಗಿಯಲ್ಲಿ ಓಬಿಸಿ ವಿರಾಟ್ ಸಮಾವೇಶಕ್ಕೆ ಕ್ಷಣಗಣನೆ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯದಲ್ಲಿ ಎಸ್ಟಿ,ಎಸ್ಟಿ ಮೀಸಲಾತಿ ಹೆಚ್ಚಳವಾದ ಮೇಲೆ ಈ ಸಮುದಾಯದವರು ಬಿಜೆಪಿ ಸಕಾ೯ರದ ಬದ್ಧತೆಯ ಬಗ್ಗೆ ಶ್ಲಾಘನೀಯವಾದ ಮಾತುಗಳನ್ನು ಮಾತಾಡುತ್ತಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಶನಿವಾರ ನಗರದ ಗ್ರ್ಯಾಂಡ್ ಹೋಟೆಲ್, ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಪಕ್ಷದ ವತಿಯಿಂದ ಐತಿಹಾಸಿಕ ಹಿಂದೂಳಿದ ವಗ೯ಗಳ ಸಮಾವೇಶ ನಡೆಯುತ್ತಿದ್ದು, ರಾಜ್ಯದಿಂದ ಒಟ್ಟು 3 ಲಕ್ಷದಷ್ಟು ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಒಬಿಸಿ ಸಮುದಾಯದವರು ಕೇಂದ್ರ ಸರಕಾರ ಕೈಗೊಂಡ ನಿರ್ಧಾರಗಳನ್ನು ಮೆಚ್ಚಿಕೊಂಡಿದ್ದಾರೆ. ಕೇಂದ್ರದಲ್ಲಿ ಒಬಿಸಿಯ 27 ಸಚಿವರಿದ್ದಾರೆ. 12 ಜನ ಎಸ್‍ಸಿ, ಎಸ್‍ಟಿ ಸಚಿವರಿದ್ದಾರೆ. ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದ್ದು, ನಿಗಮ, ಮಂಡಳಿ ಅಧ್ಯಕ್ಷತೆ ನೀಡಿದ್ದನ್ನು ಗಮನಿಸಿ ಬಿಜೆಪಿ ಎಸ್‍ಸಿ, ಎಸ್‍ಟಿ ಪರ, ಹಿಂದುಳಿದವರ ಪರ, ಸಾಮಾಜಿಕ ನ್ಯಾಯದ ಪರ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದರು.

ವಿರಾಟ್ ಸಮಾವೇಶಕ್ಕೆ ಎರಡ್ಮೂರು ತಿಂಗಳಿನಿಂದ ಪೂರ್ವಸಿದ್ಧತೆ ನಡೆದಿದೆ. ನಾನೂ ಮೂರ್ನಾಲ್ಕು ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದೇನೆ. ಸಮಾವೇಶ ಯಶಸ್ವಿ ಆಗಲಿದೆ. ಹಿಂದುಳಿದ ವರ್ಗಕ್ಕೆ ಬಿಜೆಪಿಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಮಾಜಿ ಸಚಿವ ಪ್ರಮೋದ್ ಮದ್ವರಾಜ ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್, ಮಾಜಿ ಶಾಸಕ ಅಮರನಾಥ ಪಾಟೀಲ್, ಕಲ್ಬುರ್ಗಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಎಸ್. ಪಾಟೀಲ್, ಇತರ ಮುಖಂಡರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!