ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ…

ಹೊಸದಿಗಂತ ವರದಿ ಮಂಗಳೂರು:

ದೇಶದ ಅಗ್ರಮಾನ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಮಾವೇಶಕ್ಕೆ ಗೋಲ್ಡ್ ಫಿಂಚ್ ಸಿಟಿ ಮೈದಾನ ಸಜ್ಜುಗೊಂಡಿದ್ದು, ಆಕರ್ಷಕ ರೀತಿಯಲ್ಲಿ ವೇದಿಕೆ ಮತ್ತು ಸಭಾಂಗಣ ನಿರ್ಮಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಅನುಕೂಲವಾಗುವಂತೆ ಎರಡು ಸಾವಿರ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. 12.30 ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ‌ ತೆರಳುವರು. ಬಳಿಕ ಅಲ್ಲಿನ ಕಾರ್ಯಕ್ರಮದ ರಸ್ತೆ ಮಾರ್ಗವಾಗಿ ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು.

     

ಒಟ್ಟು 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಭಾಗವಹಿಸುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!