ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋಗೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವೇ ಕ್ಷಣಗಳಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ.

ಸಂಜೆ 7 ಗಂಟೆಗೆ ರಾಮಮಂದಿರದಲ್ಲಿ (Ram Mandir) ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ 7.30ರ ಸುಮಾರಿಗೆ 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಈ ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಧಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!