ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ: ರಾಷ್ಟ್ರಕೂಟರ ಗತವೈಭವ ಸಾರುವ ವೇದಿಕೆ ಸಿದ್ಧ

ಹೊಸದಿಗಂತ ವರದಿ ಕಲಬುರಗಿ:

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಿ,ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರ ವಿರತಣೆ ಮಾಡಲು ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾಯ೯ಕ್ರಮಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು,ರಾಷ್ಟ್ರಕೂಟರ ಗತವೈಭವ ಸಾರುವ ಬೃಹತ್ ವೇದಿಕೆ ಸಜ್ಜಾಗಿದೆ.

ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದ ನೇರವಾಗಿ ಹೆಲಿಪ್ಯಾಡ್ ಮೂಲಕ ಯಾದಗಿರಿ ಜಿಲ್ಲೆಯ ಕೊಡೆಕಲ್,ಗೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ತದನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಯಾದಗಿರಿ ಕೊಡೆಕಲ್ ನಿಂದ ಮರಳಿ ಮಳಖೇಡ ಹೆಲಿಪ್ಯಾಡ್ ಗೆ ಆಗಮಿಸಿ,ಅಲ್ಲಿಂದ ನೇರವಾಗಿ ಕಾಯ೯ಕ್ರಮದ ಸ್ಥಳಕ್ಕೆ ಆಗಮಿಸಿ,ತಾಂಡಾದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾಯ೯ಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕನಾ೯ಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ತಾವರಚೆಂದ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಪ್ರಮುಖರು ಬರಮಾಡಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!