ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ರಾಮಲಲಾನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಯೋಧ್ಯೆಯಲ್ಲಿ ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಎಲ್ಲರೂ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ್ದಾರೆ.
ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್, ಆಧ್ಯಾತ್ಮ ಗುರುಗಳಾದ ಸ್ವಾಮಿ ಅವಧೇಶಾನಂದ ಗಿರಿ, ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಗುರೂಜಿ, ಧಾರ್ಮಿಕ ಮುಖಂಡ ಧೀರೇಂದ್ರ ಶಾಸ್ತ್ರಿ, ಬಹುಭಾಷಾ ನಟ ರಜನಿಕಾಂತ್, ಗಜೇಂದ್ರ ಚೌಹಾಣ್, ತೆಲುಗು ನಟ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಸೇರಿದಂತೆ ಗಣ್ಯರು ಇಂದು ಸಂಜೆ ಅಯೋಧ್ಯೆಗೆ ಬಂದಿಳಿದಿದ್ದಾರೆ .
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಅನೇಕರು ಅಯೋಧ್ಯೆಗೆ ತಲುಪಿದ್ದಾರೆ.