ಅತ್ತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ: ಇತ್ತ ಕಾರ್ಯಕ್ರಮ ಮುಂದೂಡಲು ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲು ಸಜ್ಜಾಗುತ್ತಿದ್ದು, ನಾಳೆ ದಿನಾಂಕ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದು, ಅಂತ್ಯಗೊಂಡಿದೆ.

ಇತ್ತ ಇದೇ ಸಂದರ್ಭ ನಾಳೆಯ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ್ಧರಾಮಯ್ಯ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಕ್ಷೇತ್ರದಲ್ಲಿ “ರಾಷ್ಟ್ರ ಸಮರ್ಪಣೆ ಮತ್ತು ಶಿಲಾನ್ಯಾಸ ಸಮಾರಂಭ” ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಮತ್ತು ಕರಡು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹ ಮುದ್ರಿಸಲಾಗಿದೆ. ಆದಾಗ್ಯೂ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಲಾಗಿಲ್ಲ ಮತ್ತು ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಈಗಾಗಲೇ ನಿಗದಿಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿಗದಿಪಡಿಸುವ ಮೊದಲು MORTH ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿದ್ದರೆ ಹೆಚ್ಚು ಸೂಕ್ತವಾಗಿತ್ತು. ಆದ್ದರಿಂದ, ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಇಲಾಖೆಗೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ, ಈ ಕಾರ್ಯಕ್ರಮವನ್ನು ಮುಂದೂಡಲು ಮನವಿ ಮಾಡಿದ್ದಾರೆ. ಜೊತೆಗೆ ನಿಮಗೆ ಅನುಕೂಲಕರವಾದ ಒಂದೆರಡು ದಿನಾಂಕಗಳನ್ನು ನನಗೆ ಒದಗಿಸುವಂತೆ ನಾನು ವಿನಂತಿಸುತ್ತೇನೆ. ಇದರಿಂದ ನಾನು ಈ ಮಹತ್ವದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ನಿಮ್ಮೊಂದಿಗೆ ಸೇರಲು ಸಾಧ್ಯವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!