ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರದಲ್ಲಿ ನಾಳೆ ಧರ್ಮಧ್ವಜ ಸ್ಥಾಪನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಾಲಯದ ಶಿಖರದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಇಡೀ ಅಯೋಧ್ಯಾ ನಗರವನ್ನು ದೀಪಾಲಂಕಾರ, ಹೂವುಗಳಿಂದ ಅಲಂಕರಿಸಲಾಗಿದೆ ಲೇಸರ್ ಲೈಟ್ ಮೂಲಕ ಶ್ರೀರಾಮಚಂದ್ರನ ಜೀವನದ ಕತೆಯನ್ನು ಬಿತ್ತರಿಸಲಾಯಿತು.

ನಾಳೆ ನಡೆಯುವ ಧ್ವಜಾರೋಹಣ ಸಮಾರಂಭಕ್ಕಾಗಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

