ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ದಿನಗಣನೆ: ಈ ಬಾರಿಯ ಥೀಮ್‌ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ವಾತಂತ್ರ್ಯೊತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ರಾಜ್ಯಧಾನಿ ಬೆಂಗಳೂರು ಮಾತ್ರವಲ್ಲದೇ ಇಡೀ ರಾಜ್ಯದ ಜನರನ್ನು ಆಕರ್ಷಣೆ ಮಾಡುತ್ತಿರುವ ತೋಟಗಾರಿಕೆ ಇಲಾಖೆ, ಪ್ರಸಕ್ತ ವರ್ಷ ಮಹರ್ಷಿ ವಾಲ್ಮೀಕಿ ಅವರ ಜೀವನ ಕುರಿತ ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ.

ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಜನವರಿ 16ರಿಂದ ಹತ್ತು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಅವರ ಜೀವನ ಚಿತ್ರಣವು ವಿವಿಧ ಜಾತಿಯ ಲಕ್ಷಾಂತರ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ಮಹಾನ್ ಗ್ರಂಥ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜೀವನಾಧಾರಿತ ಪುಷ್ಪ ಚಿತ್ರಣಗಳು ನೋಡುಗರ ಮೈಮನ ಸೆಳೆಯಲಿವೆ. ಮಹರ್ಷಿ ಅವರು ರಾಮಾಯಣ ಬರೆಯುತ್ತಿರುವ ಚಿತ್ರ, ರಾಮಾಯಣ ಪುಸ್ತಕದ ಚಿತ್ರ ಸೇರಿದಂತೆ ಹಲವು ಆಕರ್ಷಣೆಗಳು ವಿವಿಧ ಹೂವುಗಳಿಂದ ವಿನ್ಯಾಸಗೊಳ್ಳಲಿವೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!