ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಂದು ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಅದ್ಧೂರಿ ಚಾಲನೆ ದೊರೆಯಲಿದೆ.
ಕಾರ್ಯಕ್ರಮಕ್ಕೆ ಕೌಂಟ್ಡೌನ್ ಆರಂಭವಾಗಿದ್ದು, ಈಗಾಗಲೇ ರಾಜ್ಯದ ಕೈ ನಾಯಕರು ಮೈಸೂರಿನಲ್ಲಿದ್ದಾರೆ. ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಮಹಿಳೆಯರ ನೆಚ್ಚಿನ ಯೋಜನೆಗಳಲ್ಲಿ ಒಂದಾಗಿದೆ.
ಕಾಂಗ್ರೆಸ್ನ ಅತಿದೊಡ್ಡ ಕಾರ್ಯಕ್ರಮಕ್ಕೆ ಮೈಸೂರು ನಗರಿ ಸಿದ್ಧವಾಗಿದೆ. ಮೈಸೂರಿನ ರಸ್ತೆ ರಸ್ತೆಗಳಲ್ಲಿ ಕಟೌಟ್ ಹಾಗೂ ಬ್ಯಾನರ್ಗಳು ರಾರಾಜಿಸುತ್ತಿವೆ. ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಹಿಂಬದಿಯಲ್ಲಿ 104 ಅಡಿ ಅಗಲದ ಪರದೆ ನಿರ್ಮಿಸಲಾಗಿದೆ. ಫಲಾನುಭವಿಗಳನ್ನು ಕಾಲೇಜುಗಳಿಗೆ ಕರೆತರಲು ಎರಡು ಸಾವಿರ ಬಸ್ಗಳನ್ನು ಬಿಡಲಾಗಿದೆ.
ಎರಡು ದಿನದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿ ಸಿದ್ಧತೆಗಳನ್ನು ಗಮನಿಸುತ್ತಿದ್ದಾರೆ. ಮಹಾರಾಜ ಕಾಲೇಜಿನ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.