ಐಪಿಎಲ್ ಆರಂಭಕ್ಕೆ ಕ್ಷಣಗಣನೆ: ಡೆಲ್ಲಿ ಕ್ಯಾಪಿಟಲ್ಸ್ ಗೆ ನೂತನ ಸಾರಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ.
ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ನಾಯಕತ್ವದಿಂದ ಕೆಳಗಿಳಿದಿದ್ದು, ತಂಡದ ಮಾಜಿ ನಾಯಕ ರಿಷಬ್ ಪಂತ್ ಮತ್ತೊಮ್ಮೆ ತಂಡದ ಚುಕ್ಕಾಣಿ ಹಿಡಿದಿದ್ದಾರೆ.

2023 ರ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅಂದಿನಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದರು.

ಆದರೀಗ ಪೂರ್ಣ ಚೇತರಿಸಿಕೊಂಡು ಕ್ರಿಕೆಟ್​ ಅಂಗಳಕ್ಕಿಳಿಯಲು ಸಜ್ಜಾಗಿರುವ ಪಂತ್, ಐಪಿಎಲ್ ಮೂಲಕ ವೃತ್ತಿಪರ ಕ್ರಿಕೆಟ್​ಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಕಳೆದ ಆವೃತ್ತಿಯಲ್ಲಿ ಪಂತ್ ಅಲಭ್ಯತೆಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ತಂಡದ ಖಾಯಂ ನಾಯಕ ರಿಷಬ್ ಪಂತ್​ಗೆ ನಾಯಕತ್ವವನ್ನು ಬಿಟ್ಟುಕೊಟ್ಟಿದ್ದಾರೆ.

ಡೆಲ್ಲಿ ತಂಡ: ರಿಷಭ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ರಿಕಿ ಭುಯಿ, ಶಾಯ್ ಹೋಪ್, ಪೃಥ್ವಿ ಶಾ, ಹ್ಯಾರಿ ಬ್ರೂಕ್, ಯಶ್ ಧುಲ್, ಸ್ವಸ್ತಿಕ್ ಚಿಕಾರಾ, ಡೇವಿಡ್ ವಾರ್ನರ್, ಪ್ರವೀಣ್ ದುಬೆ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ವಿಕಿ ಓಸ್ತ್ವಾಲ್, ಸುಮಿತ್ ಕುಮಾರ್ , ಅನ್ರಿಚ್ ನೋಕಿಯಾ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಜ್ಯೆ ರಿಚರ್ಡ್ಸನ್, ರಾಸಿಖ್ ಸೇಲಂ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!