ಭಾರತದ 15ನೇ ರಾಷ್ಟ್ರಪತಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಂದು ಬೆಳಗ್ಗೆ 10.15ಕ್ಕೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಮುರ್ಮು ಅವರಿಗೆ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಸಂಸದರುಗಳು ಹಾಗೂ ವಿವಿಧ ಸಚಿವರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ರಾಜತಾಂತ್ರಿಕ ಕಾರ್ಯಗಳ ಮುಖ್ಯಸ್ಥರು, ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಮಾರಂಭದ ಬಳಿಕ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದು, ಅಲ್ಲಿ ಅವರಿಗೆ ಸೇನಾ ಗೌರವ ನೀಡಲಾಗುತ್ತದೆ. ಈ ಸಂದರ್ಭ ನಿರ್ಗಮಿತ ರಾಷ್ಟ್ರಪತಿಗೂ ಗೌರವ ಸಲ್ಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿ ಹುದ್ದೆ ಅಲಂಕರಿಸುತ್ತಿರುವ ಬುಡಕಟ್ಟು ಸಮುದಾಯದ ಮೊದಲನೇಯವರು ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!