July 22, 2026
Wednesday, July 22, 2026
spot_img

ನೂತನ ಸಿಎಂ ಪ್ರಮಾಣವಚನಕ್ಕೆ ಕೌಂಟ್ ಡೌನ್: ಕಾರ್ಯಕ್ರಮ ಆಯೋಜನೆಗೆ ಸ್ಥಳ ಫಿಕ್ಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಹುತೇಕ ಪಕ್ಕಾ ಆಗಿದ್ದು, ನಾಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆಯಾಗಲಿದೆ.

ಇದರ ನಡುವೆ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗದಿಯಾಗಿದೆ. ಭರದಿಂದ ಸಿದ್ಧತೆಗಳು ನಡೆಯುತ್ತಿವೆ.

ವಿಧಾನಸೌಧದ ಮೆಟ್ಟಿಲು ಮೇಲೆ ಆಯೋಜನೆ

ವಿಧಾನಸೌಧದ ಮೆಟ್ಟಿಲು ಮೇಲೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಈ ಸಂಬಂಧ ಸಿದ್ಧತೆಗಳು ಶುರುವಾಗಿದೆ.

ನಾಳೆ ಸಂಜೆ 4 ಗಂಟೆಗೆ ಸಿಎಲ್‌ಪಿ ಸಭೆ ನಡೆಯಲಿದ್ದು, ನೂತನ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರು ಅಂತಿಮವಾಗಲಿದೆ. ಬಳಿಕ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಹೊಸ ಸಂಪುಟ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಉನ್ನತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಜೂನ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸುವ ಸಾಧ್ಯತೆಗಳಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !