August 1, 2026
Saturday, August 1, 2026
spot_img

‘ಟಾಕ್ಸಿಕ್’ ಟ್ರೈಲರ್ ಕೌಂಟ್‌ಡೌನ್ ಶುರು: ರಾಕಿ ಭಾಯ್ ಕಡೆಯಿಂದ ಬಿಗ್ ಅಪ್‌ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಶುರುವಾಗಿದೆ. ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದ ಪ್ರೇಕ್ಷಕರಿಗೆ ನಟ ಯಶ್ ವಿಶೇಷ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

ಕಣ್ಣುಸೆಳೆಯುವ ಮಾಸ್ ಪೋಸ್ಟರ್

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಯಶ್ ಬಿಡುಗಡೆ ಮಾಡಿರುವ ನೂತನ ಬ್ಲ್ಯಾಕ್ ಅಂಡ್ ವೈಟ್ ಲುಕ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾ ಈಗಾಗಲೇ ಸ್ಯಾಂಡಲ್‌ವುಡ್‌ನಿಂದ ಹಿಡಿದು ಹಾಲಿವುಡ್‌ವರೆಗೆ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ.

ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್

ಚಿತ್ರತಂಡ ಹಂಚಿಕೊಂಡಿರುವ ಅಧಿಕೃತ ಮಾಹಿತಿಯಂತೆ, ಆಗಸ್ಟ್ 8ರ ಶನಿವಾರದಂದು ‘ಟಾಕ್ಸಿಕ್’ ಚಿತ್ರದ ಅಧಿಕೃತ ಟ್ರೈಲರ್ ಧಮಾಕ ಸೃಷ್ಟಿಸಲಿದೆ. ಆದರೆ ಟ್ರೈಲರ್ ಯಾವ ನಿರ್ದಿಷ್ಟ ಸಮಯಕ್ಕೆ ಅನಾವರಣಗೊಳ್ಳಲಿದೆ ಎಂಬುದನ್ನು ಚಿತ್ರತಂಡ ಇನ್ನು ಸಸ್ಪೆನ್ಸ್ ಆಗಿಟ್ಟಿದೆ. ಈ ಅಪ್‌ಡೇಟ್‌ ಸಿಗುತ್ತಿದ್ದಂತೆ ಅಭಿಮಾನಿಗಳ ಕಾತರ ದ್ವಿಗುಣಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !