Tuesday, January 27, 2026
Tuesday, January 27, 2026
spot_img

ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ: ಸಾಂಪ್ರದಾಯಿಕ ಹಲ್ವಾ ತಯಾರಿಸಿ ಹಂಚಿದ ಸಚಿವೆ ನಿರ್ಮಲಾ ಸೀತಾರಾಮನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ.ಫೆ.1 ಭಾನುವಾರ ಹಣಕಾಸು ಸಚಿವೆ ಸೀತಾರಾಮನ್‌ 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಈ ಹಿನ್ನೆಲೆ ಇಂದು ನಿರ್ಮಲಾ ಸೀತಾರಾಮನ್ ಅವರು ಹಲ್ವಾ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಚಿವಾಲಯದ ಅಡಿಯಲ್ಲಿರುವ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಇತರ ಹಿರಿಯ ಅಧಿಕಾರಿಗಳು ಇದ್ದರು.

ಬಳಿಕ ಹಣಕಾಸು ಸಚಿವರು ಬಜೆಟ್ ಮುದ್ರಣಾಲಯಕ್ಕೆ ಪ್ರವಾಸ ಕೈಗೊಂಡು ಸಿದ್ಧತೆಗಳನ್ನು ಪರಿಶೀಲಿಸಿದರು ಮತ್ತು ಬಜೆಟ್ ತಂಡಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಬಜೆಟ್ ಮಂಡನೆಗೂ ಮುನ್ನ ಹಲ್ವಾ ಹಂಚುವುದು ಸಂಪ್ರದಾಯ. ಇದಕ್ಕೆ ಕಾರಣ ಸಿಹಿ ತಿಂಡಿಗಳನ್ನು ತಯಾರಿಸಿ ಹಂಚುವುದು ಅನೇಕ ಭಾರತೀಯ ಸಮಾರಂಭಗಳು ಮತ್ತು ಹಬ್ಬಗಳ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಬಜೆಟ್ ಮಂಡನೆ ಕಾರ್ಯದಲ್ಲೂ ಇದೇ ವಿಧಾನವನ್ನು ಅನುಸರಿಸಲಾಗುತ್ತಿದೆ. ಅದರ ಹೊರತಾಗಿ ಬಜೆಟ್ ಗೌಪ್ಯತೆ ಕಾಪಾಡುವುದೇ ಆ ಉದ್ದೇಶ.

ಬಜೆಟ್ ಅಧಿವೇಶನಕ್ಕೆ 4-5 ದಿನಗಳ ಮೊದಲು ಹಣಕಾಸು ಇಲಾಖೆ ‘ಹಲ್ವಾ’ ಸಮಾರಂಭ ಆಯೋಜಿಸುತ್ತದೆ. ದೊಡ್ಡ ಬಾಣಲೆಯಲ್ಲಿ ತಯಾರಿಸಿದ ಹಲ್ವಾವನ್ನು ಕೇಂದ್ರ ಸಚಿವರು ಹಂಚುತ್ತಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !