ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ ಕೇಂದ್ರ ಬಜೆಟ್‌ಗೆ ಅನುಮೋದನೆ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಂಸತ್ತಿನಲ್ಲಿ ಹಾಜರಾಗಿದ್ದಾರೆ.
ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಸಂಸತ್ತಿಗೆ ಆಗಮಿಸಿದ್ದಾರೆ. ಇನ್ನು ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಸಂಸತ್ತಿನಲ್ಲಿ ಹಾಜರಾಗಿದ್ದಾರೆ.