ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಿಗೇ ಕೇಂದ್ರ ಹಮಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ!
ಈ ಬಾರಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದ್ದು, ಕೇರಳ ಸಹಿತ ಕೆಲವು ರಾಜ್ಯಗಳಲ್ಲಿ ಸರಾಸರಿಗಿಂತ ಶೇ.106 ರಷ್ಟು ಹೆಚ್ಚು‘ವರಿ’ ಮಳೆಯಾಗಲಿದೆ ಎಂದು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ, ಇದೇ 31 ರಂದು ಮುಂಗಾರು ಆಗಮಿಸಲಿದೆ. ಉತ್ತರ ಭಾರತದ ಕೆಲವು ರಾಜ್ಯಗಳನ್ನು ಹೊರತುಪಡಿಸಿ, ದೇಶದಲ್ಲಿ ಉತ್ತಮ ಮಳೆಯಾಗಲಿದೆ. ಮೇ ತಿಂಗಳಲ್ಲಿ ಕೇರಳದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.