ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್‌ಡಿಎ ಆರಂಭಿಕ ಮುನ್ನಡೆ ಸಾಧಿಸಿದೆ.
ಅಂಚೆ ಮತದಾನದಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾವಿಕಾಸ್ ಅಘಾಡಿ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಉಳಿದವರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಈ ಬಾರಿ ಶೇ.62.05ರಷ್ಟು ಮತದಾನವಾಗಿದೆ.