ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಆಶೀರ್ವಾದ ನೀಡುವ ಶಕ್ತಿ ದೇವತೆ ಹಾಸನಾಂಬೆಯ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಶ್ವೀಜ ಮಾಸದ ಮೊದಲ ದಿನವಾದ ಇಂದು ಶಾಸ್ತ್ರೋಕ್ತವಾಗಿ ದೇವಿಯ ಗುಡಿಯ ಬಾಗಿಲು ತೆರೆಯಲಾಗುವುದು. ನ.3ರ ಬೆಳಗ್ಗೆವರೆಗೆ ದೇವಿ ದರುಶನಕ್ಕೆ ಅವಕಾಶವಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದೆ.
ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ದಿನದ 24 ಗಂಟೆಯೂ ದೇವಿಯ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಳೆ-ಬಿಸಿಲಿನಿಂದ ಭಕ್ತರು ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ.