ದಿಗಂತ ವರದಿ ಚಿತ್ರದುರ್ಗ :
ಲೋಕಸಭಾ ಚುನಾವಣೆ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮೊದಲನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 32,164 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 32,239 ಮತಗಳನ್ನು ಗಳಿಸಿ ಮುನ್ನಡೆ ಸಾಧಿಸಿದ್ದಾರೆ.
ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 35,821 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಬಿ ಎಂ ಚಂದ್ರಪ್ಪ 32,405 ಮತಗಳನ್ನು ಗಳಿಸಿ ಹಿನ್ನಡೆ ಅನುಭವಿಸಿದ್ದಾರೆ
ಮೂರನೇ ಸತ್ಯನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 67,985 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಬಿ ಎಂ ಚಂದ್ರಪ್ಪ 64,644 ಮತಗಳನ್ನು ಗಳಿಸಿದ್ದಾರೆ.
ಎರಡು ಮತ್ತು ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಸಾಧಿಸಿದ್ದಾರೆ.
ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹತ್ತು ಸಾವಿರ 1,03,537 ಮತಗಳು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 95,455 ಮತಗಳನ್ನು ಗಳಿಸಿ ಹಿನ್ನಡೆ ಅನುಭವಿಸಿದ್ದಾರೆ.
ಐದನೆಯ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 1,37,830 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ 1,28,037 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಿರಂತರ ಮುನ್ನಡೆಯನ್ನು ಸಾಧಿಸುತ್ತಿದ್ದಾರೆ.