ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಇನ್ನೂ ಮತ ಎಣಿಕೆ ಪೂರ್ಣವಾಗಿಲ್ಲ. ಸಂಪೂರ್ಣ ಫಲಿತಾಂಶ ಬರಲಿ ನಂತರ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ.
ಪ್ರತಿ ಚುನಾವಣೆ ವಿಭಿನ್ನವಾಗಿ ಇರುತ್ತದೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಷಯಗಳ ಮೇಲೆ ಚುನಾವಣೆ ಆಗುತ್ತದೆ. ರಾಜ್ಯದ ಚುನಾವಣೆ ಸ್ಥಳೀಯ ವಿಷಯಗಳ ಮೇಲೆ ಆಗುತ್ತದೆ. ಎರಡನ್ನು ಒಂದೇ ರೀತಿಯಲ್ಲಿ ನೋಡೋಣ ಎಂದು ತಿಳಿಸಿದ್ದಾರೆ.