ಹೊಸದಿಗಂತ ಡಿಜಿಟಲ್ ಡೆಸ್ಕ್:
28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನನ್ನು ನಿಯೋಜಿಸಲಾಗಿದೆ.
ಪೂರ್ವ ಮತ್ತು ಪಶ್ಚಿಮ ವಿಭಾಗದ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತಾ ವ್ಯವಸ್ಥೆಗಳ ಮೇಲ್ವಿಚಾರಣೆ ವಹಿಸಿಕೊಂಡಿದ್ದಾರೆ. 10 ಡಿಸಿಪಿಗಳು, 15 ಸಹಾಯಕ ಪೊಲೀಸ್, 38 ಪೊಲೀಸ್ ಇನ್ಸ್‌ಪೆಕ್ಟರ್, 250 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಜೊತೆಗೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.