ಉತ್ತಮ ಜಲ ಸಂಪನ್ಮೂಲ ಹೊಂದಿರುವ ರಾಷ್ಟ್ರಗಳು ಮುನ್ನಡೆಯಲು ಸಾಧ್ಯ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಪಿಎಂ ನರೇಂದ್ರ ಮೋದಿ, 21ನೇ ಶತಮಾನದಲ್ಲಿ ಉತ್ತಮ ಜಲ ಸಂಪನ್ಮೂಲಗಳನ್ನು ಹೊಂದಿರುವ ರಾಷ್ಟ್ರಗಳು ಮಾತ್ರ ಮುನ್ನಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ಪ್ರಮುಖ ನದಿ ಕಣಿವೆ ಯೋಜನೆಗಳ ಅಭಿವೃದ್ಧಿ ಮತ್ತು ಕೇಂದ್ರ ಜಲ ಆಯೋಗದ ರಚನೆಯಲ್ಲಿ ಅಂಬೇಡ್ಕರ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದ ಹೆಚ್ಚುತ್ತಿರುವ ನೀರಿನ ಸಂರಕ್ಷಣೆಯ ಅಗತ್ಯಕ್ಕೆ ಎಂದಿಗೂ ಗಮನ ಕೊಡಲಿಲ್ಲ. 21ನೇ ಶತಮಾನದ ಪ್ರಮುಖ ಸವಾಲೆಂದರೆ ನೀರಿನ ಭದ್ರತೆ. 21ನೇ ಶತಮಾನದಲ್ಲಿ ಸರಿಯಾದ ನಿರ್ವಹಣೆಯೊಂದಿಗೆ ಸಮರ್ಪಕ ಜಲಸಂಪನ್ಮೂಲ ಹೊಂದಿರುವ ದೇಶಗಳು ಮಾತ್ರ ಮುನ್ನಡೆಯಲಿವೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಮೋದಿ ಬಿಡುಗಡೆ ಮಾಡಿದರು. ವಾಜಪೇಯಿ ಸರ್ಕಾರವು ದೇಶದ ನೀರಾವರಿ ಅಗತ್ಯಗಳಿಗೆ ಮತ್ತು ಪ್ರವಾಹವನ್ನು ಎದುರಿಸಲು ಪರಿಹಾರವಾಗಿ ನದಿ ಜೋಡಣೆಯನ್ನು ಪ್ರಸ್ತಾಪಿಸಿತ್ತು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!