ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ.25 ರಷ್ಟು ಸುಂಕ ಮತ್ತು ಹೆಚ್ಚುವರಿ ದಂಡವನ್ನು ಘೋಷಿಸಿದ ಕೂಡಲೇ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ಭಾರತದ ವಿದೇಶಾಂಗ ನೀತಿ ಸಂಪೂರ್ಣವಾಗಿ “ವಿಫಲವಾಗಿದೆ” ಎಂದು ಹೇಳಿದೆ.
ಪ್ರಧಾನಿ ಮೋದಿ ಮತ್ತು ಟ್ರಂಪ್ ನಡುವಿನ ಸ್ನೇಹಕ್ಕೆ ದೇಶ ಈಗ ಬೆಲೆ ತೆರುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್, “ಟ್ರಂಪ್ ಭಾರತದ ಮೇಲೆ ದಂಡದ ಜೊತೆಗೆ ಶೇ.25 ರಷ್ಟು ಸುಂಕವನ್ನು ವಿಧಿಸಿದ್ದಾರೆ. ನರೇಂದ್ರ ಮೋದಿ ಅವರ ‘ಸ್ನೇಹಕ್ಕಾಗಿ’ ದೇಶ ಬೆಲೆ ತೆರುತ್ತಿದೆ.” ಎಂದು ಕಿಡಿಕಾರಿದೆ.