ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಈ ನೆಲದ ಕಾನೂನು ಸರ್ವೋಚ್ಚವಾಗಿದೆ ಅದನ್ನು ಪಾಲನೇ ಮಾಡಲೇಬೇಕಾಗಿದೆ ಅಂತ ಟ್ವಿಟರ್ಗೆ ಎಚ್ಚರಿಕೆ ನೀಡಿದ್ದಾರೆ.
ನೂತನ ಮಾಹಿತಿ ತಂತ್ರಜ್ಞಾನ ಕಾಯ್ದೆ ಅನುಸರಿಸಲು ಟ್ವಿಟರ್ ಕೇಂದ್ರ ಸರ್ಕಾರದ ಜತೆ ಜಿದ್ದಾಜಿದ್ದಿಗೆ ಬಿದ್ದಿರುವ ನಡುವೆಯೇ ನೂತನ ಸಚಿವ ವೈಷ್ಣವ್ ಈ ಎಚ್ಚರಿಕೆಯನ್ನು ನೀಡಿದ್ದಾರೆ
ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೈಷ್ಣವ್, ಭಾರತದಲ್ಲಿ ವಾಸಿಸುವವರು ಮತ್ತು ಕಾರ್ಯನಿರ್ವಹಿಸುವವರು ಈ ದೇಶದ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.