ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ, ಇಂದು ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇಂದು ಲೋಕಾರ್ಪಣೆಯಾಗಲಿದೆ. ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಲಿದ್ದಾರೆ.

Watch | Now, a 3D printed post office building coming up in Bengaluru - The Hinduಅಂಚೆ ಇಲಾಖೆಯಿಂದ ಈ ಕಟ್ಟಡ ನಿರ್ಮಾಣವಾಗಿದ್ದು, ಕೇಂಬ್ರಿಡ್ಜ್ ಲೇಔಟ್ ಪಿಒ ಎಂದು ಹೆಸರಿಡಲಾಗಿದೆ. ಮಾರ್ಚ್ 21ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು, 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

L&T is building India's first 3D-printed post office in Bengaluru | See Picsಒಳಚರಂಡಿ ಹಾಗೂ ನೀರಿನ ಸಂಪರ್ಕ ಸಂಬಂಧಿತ ವಿವಿಧ ಕೆಲಸಗಳಿಂದ ಉದ್ಘಾಟನೆ ತುಸು ತಡವಾಗಿದ್ದು, ಇಂದು ಸಚಿವ ಅಶ್ವಿನಿ ವೈಷ್ಣವ್ ಕಚೇರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

Bengaluru to get first-of-its-kind 3D printed post office building - The Hinduಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಿ ಅಲ್ಲಿನ ಸಿಬ್ಬಂದಿ ಮತ್ತು ಸಾಮಾಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡ ನಿರ್ಮಾಣಕ್ಕೆ ಒಟ್ಟಾರೆ 26 ಲಕ್ಷ ರೂಪಾಯಿ ವೆಚ್ಚವಾಗಿದೆ. ಆದರೆ ಇತರೆ ಎಲ್ಲಾ ವೆಚ್ಚಗಳನ್ನೂ ಸೇರಿಸಿದರೆ ಒಟ್ಟಾರೆ 40ಲಕ್ಷ ರೂಪಾಯಿ ಖರ್ಚಾಗಿದೆ. ಸಾಂಪ್ರದಾಯಿಕ ಕಟ್ಟಡಗಳಿಗೆ ಹೋಲಿಸಿದರೆ ಶೇ.30-40ರಷ್ಟು ಹಣ ಕಡಿಮೆ ವೆಚ್ಚವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!