ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ದೇಶದ ಸಂಪತ್ತು ಅಲ್ಪ ಸಂಖ್ಯಾತರಿಗೆ ಮಾತ್ರ ಸೇರಿದ್ದಲ. ದೇಶದ ಸಂಪತ್ತಿನ ಮೇಲೆ ದಲಿತರು, ಬಡವರು ಮತ್ತು ಬುಡಕಟ್ಟು ಜನಾಂಗದವರಿಗೂ ಹಕ್ಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮಗುರುಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ದೇಶದ ಸಂಪತ್ತು ನಿಮ್ಮದು ಎಂದು ಹೇಳಿದ್ದರು. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.