ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಮದನಪಲ್ಲಿಗೆ ತೆರಳುತ್ತಿದ್ದ ಕಾರ್ ರಸ್ತೆಯ ಬಲಬದಿಯ ಹಳ್ಳಕ್ಕೆ ಬಿದ್ದಿದ್ದು, ಕಾರ್‌ನಲ್ಲಿದ್ದ ದಂಪತಿ ಶಫಿ ಹಾಗೂ ಶಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಗಳು ವಿದೇಶಕ್ಕೆ ತೆರಳುತ್ತಿದ್ದ ಕಾರಣ, ಆಕೆಯನ್ನು ಏರ್‌ಪೋರ್ಟ್‌ಗೆ ಡ್ರಾಪ್ ಮಾಡಿ ಮದನಪಲ್ಲಿಗೆ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.