ಹೊಸದಿಗಂತ ವರದಿ, ಹಾವೇರಿ:
ಪ್ರೀತಿಸಿದ ಹುಡುಗಿಯೊಂದಿಗೆ ಯುವಕ ನಾಪತ್ತೆಯಾದ ಹಿನ್ನೆಲೆಯಲ್ಲಿ ಹುಡುಗಿ ಸಂಬಂಧಿಕರು ಯುವಕನ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.
ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಮಹಿಳೆಯನ್ನು
ಹನುಮವ್ವ ಮೆಡ್ಲೇರಿ (೫೦) ಎಂದು ಗುರುತಿಸಲಾಗಿದೆ.
ಚಂದ್ರಪ್ಪ, ಗಂಗಪ್ಪ ಹಾಗೂ ಗುತ್ತೆವ್ವ ಎಂಬುವರು ಹನುಮವ್ವಳನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಹನುಮವ್ವಳ ಮಗ ಮಂಜುನಾಥ ಯುವತಿಯನ್ನ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥ ರ ವಿರುದ್ಧದ ಕ್ರಮ ಕೈಗೊಂಡಿದ್ದು, ಯುವಕನ ತಾಯಿಗೆ ರಕ್ಷಣೆ, ಗ್ರಾಮದಲ್ಲಿ ಬಂದೋಬಸ್ತಗೆ ಕ್ರಮ ವಹಿಸಲಾಗಿದೆ ಎಂದ ಎಸ್ಪಿ ತಿಳಿಸಿದ್ದಾರೆ.