Tuesday, December 30, 2025

ಜೊತೆಗೆ ಜೀವನ ಮಾಡಲು ಆಗಲೇ ಇಲ್ಲ! ಪ್ರೀ ವೆಡ್ಡಿಂಗ್‌ ಫೋಟೊಶೂಟ್‌ ಮುಗಿಸಿ ಬರುತ್ತಿದ್ದ ಕಪಲ್‌ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಫೋಟೋಶೂಟ್‌ಗೆ ಹೋಗಿದ್ದ ಭಾವಿ ದಂಪತಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳ ಹಾಗೂ ಕಾರಟಗಿ ತಾಲೂಕಿನ ಮುಷ್ಟೂರು ಗ್ರಾಮದ ಕವಿತಾ ಮೃತರು. ಈ ಜೋಡಿಯ ಮದುವೆಯನ್ನು ಇದೇ ತಿಂಗಳ 20ರಂದು ನಿಶ್ಚಯಿಸಲಾಗಿತ್ತು. ಮದುವೆ ಹಿನ್ನೆಲೆ ಇಬ್ಬರು ಪ್ರೀ-ವೆಡ್ಡಿಂಗ್ ಶೂಟ್‌ಗಾಗಿ ತೆರಳಿದ್ದರು.

ಮುನಿರಾಬಾದ್‌ನ ಪಂಪಾವನ, ಕೂಕನಪಳ್ಳಿಯ ಬೂದೇಶ್ವರ ದೇವಸ್ಥಾನ ಬಳಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಬಳಿಕ ಮೃತ ಕರಿಯಪ್ಪ, ಕವಿತಾಳನ್ನು ಬೈಕ್ ಮೇಲೆ ಮುಷ್ಟೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಚಿಕ್ಕಬೆಣಕಲ್ ಗ್ರಾಮದ ಬಳಿ ಲಾರಿಯನ್ನು ಓವರ್ ಟೆಕ್ ಮಾಡುವಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲು ಮಾಡಿ, ತನಿಖೆ ಆರಂಭಿಸಿದ್ದಾರೆ.

error: Content is protected !!